ಬೈಬಲ್ · Indian Revised Version (Kannada) 2019
ಕೀರ್ತನೆಗಳು 100
1 ಸಮಸ್ತಭೂನಿವಾಸಿಗಳೇ, ಯೆಹೋವನಿಗೆ ಉತ್ಸಾಹಧ್ವನಿಮಾಡಿರಿ.
2 ಯೆಹೋವನನ್ನು ಸಂತೋಷದಿಂದ ಸೇವಿಸಿರಿ; ಕೀರ್ತನೆ ಹಾಡುತ್ತಾ ಆತನ ಸನ್ನಿಧಿಗೆ ಬನ್ನಿರಿ.
3 ಯೆಹೋವನೇ ದೇವರೆಂದು ತಿಳಿದುಕೊಳ್ಳಿರಿ. ನಮ್ಮನ್ನು ಉಂಟುಮಾಡಿದವನು ಆತನೇ; ನಾವು ಆತನವರು, ಆತನ ಪ್ರಜೆಯೂ, ಆತನು ಪಾಲಿಸುವ ಹಿಂಡೂ ಆಗಿದ್ದೇವೆ.
4 ಕೃತಜ್ಞತಾ ಸ್ತುತಿಯೊಡನೆ ಆತನ ಮಂದಿರದ್ವಾರಗಳಿಗೂ, ಸ್ತುತಿಸ್ತೋತ್ರದೊಡನೆ ಆತನ ಅಂಗಳಗಳಿಗೂ ಬನ್ನಿರಿ; ಆತನ ಉಪಕಾರಗಳನ್ನು ಸ್ಮರಿಸಿರಿ; ಆತನ ನಾಮವನ್ನು ಕೊಂಡಾಡಿರಿ.
5 ಯೆಹೋವನು ಒಳ್ಳೆಯವನು; ಆತನ ಕೃಪೆಯು ಯುಗಯುಗಕ್ಕೂ, ಆತನ ಸತ್ಯತೆಯು ತಲತಲಾಂತರಕ್ಕೂ ಇರುವವು.
Indian Revised Version (Kannada) 2019 — © 2017, 2019 Bridge Connectivity Solutions — CC BY-SA 4.0