ಬೈಬಲ್ · Indian Revised Version (Kannada) 2019
ಕೀರ್ತನೆಗಳು 113
1 ಯೆಹೋವನಿಗೆ ಸ್ತೋತ್ರ! ಯೆಹೋವನ ಸೇವಕರೇ, ಸ್ತೋತ್ರಮಾಡಿರಿ; ಯೆಹೋವನ ನಾಮವನ್ನು ಸ್ತುತಿಸಿರಿ.
2 ಈಗಿನಿಂದ ಯುಗಯುಗಕ್ಕೂ, ಯೆಹೋವನ ನಾಮವು ಕೀರ್ತಿಸಲ್ಪಡಲಿ.
3 ಯೆಹೋವನ ನಾಮವು ಪೂರ್ವದಿಂದ, ಪಶ್ಚಿಮದವರೆಗೂ ಸ್ತುತಿಹೊಂದಲಿ.
4 ಯೆಹೋವನು ಎಲ್ಲಾ ಜನಾಂಗಗಳಲ್ಲಿ ಮಹೋನ್ನತನು; ಆತನ ಪ್ರಭಾವವು ಮೇಲಣ ಲೋಕಕ್ಕಿಂತಲೂ ಉನ್ನತವಾಗಿದೆ.
5 ನಮ್ಮ ಯೆಹೋವ ದೇವರಿಗೆ ಸಮಾನರು ಯಾರು? ಆತನು ಉನ್ನತಲೋಕದಲ್ಲಿ ಆಸನಾರೂಢನಾಗಿ,
6 ಆಕಾಶವನ್ನೂ, ಭೂಮಿಯನ್ನೂ ನೋಡಲಿಕ್ಕೆ ಬಾಗುತ್ತಾನೆ.
7 ಆತನು ದೀನರನ್ನು ಧೂಳಿನಿಂದ ಎಬ್ಬಿಸಿ, ಬಡವರನ್ನು ತಿಪ್ಪೆಯಿಂದ ಎತ್ತುತ್ತಾನೆ.
8 ಪ್ರಭುಗಳ ಜೊತೆಯಲ್ಲಿ, ಅಂದರೆ ಅವರ ಜನಾಧಿಪತಿಗಳೊಡನೆ ಅವರನ್ನು ಕುಳ್ಳಿರಿಸುತ್ತಾನೆ.
9 ಬಂಜೆಯು ಮಕ್ಕಳೊಂದಿಗೆ, ಸಂತೋಷದಿಂದ ಮನೆಯಲ್ಲಿ ವಾಸಿಸುವ ಹಾಗೆ ಮಾಡುತ್ತಾನೆ. ಯೆಹೋವನಿಗೆ ಸ್ತೋತ್ರ!
Indian Revised Version (Kannada) 2019 — © 2017, 2019 Bridge Connectivity Solutions — CC BY-SA 4.0