ಬೈಬಲ್ · Indian Revised Version (Kannada) 2019

ಕೀರ್ತನೆಗಳು 120

1 ನನ್ನ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಟ್ಟೆನು; ಆತನು ಸದುತ್ತರವನ್ನು ದಯಪಾಲಿಸಿದನು.

2 ಯೆಹೋವನೇ, ಸುಳ್ಳು ಬಾಯಿಯೂ, ವಂಚಿಸುವ ನಾಲಿಗೆ ಉಳ್ಳವರಿಂದ ನನ್ನನ್ನು ಬಿಡಿಸು.

3 ವಂಚಿಸುವ ನಾಲಿಗೆಯೇ, ದೇವರು ನಿನಗೇನು ಕೊಡಬೇಕು? ಯಾವ ಹೆಚ್ಚಿನ ಶಿಕ್ಷೆಯನ್ನು ಒದಗಿಸಬೇಕು?

4 ಶೂರನ ಹದವಾದ ಬಾಣಗಳನ್ನೂ, ಜಾಲಿಯ ಕೆಂಡಗಳನ್ನೂ ನಿನಗೆ ಕೊಡುವರು.

5 ಅಯ್ಯೋ, ನಾನು ಮೇಷೆಕಿನವರಲ್ಲಿ ತಂಗಬೇಕಲ್ಲಾ! ಕೇದಾರಿನವರ ಪಾಳೆಯಗಳಲ್ಲಿ ವಾಸಿಸಬೇಕಾಯಿತಲ್ಲಾ!

6 ಸಮಾಧಾನವನ್ನು ದ್ವೇಷಿಸುವವರೊಳಗೆ, ಇದ್ದು ಇದ್ದು ಸಾಕಾಯಿತು.

7 ನಾನು ಸಮಾಧಾನಪ್ರಿಯನು; ಅವರೋ, ನಾನು ಮಾತನಾಡಿದರೆ ಯುದ್ಧಕ್ಕೆ ಬರುತ್ತಾರೆ.

Indian Revised Version (Kannada) 2019 — © 2017, 2019 Bridge Connectivity Solutions — CC BY-SA 4.0