ಬೈಬಲ್ · Indian Revised Version (Kannada) 2019

ಕೀರ್ತನೆಗಳು 121

1 ನಾನು ಕಣ್ಣೆತ್ತಿ ಪರ್ವತಗಳ ಕಡೆಗೆ ನೋಡುತ್ತೇನೆ; ನನ್ನ ಸಹಾಯವು ಎಲ್ಲಿಂದ ಬರುವುದು?

2 ಭೂಮಿ, ಆಕಾಶಗಳನ್ನು ನಿರ್ಮಿಸಿದ ಯೆಹೋವನಿಂದಲೇ, ನನ್ನ ಸಹಾಯವು ಬರುತ್ತದೆ.

3 ಆತನು ನಿನ್ನ ಪಾದಗಳನ್ನು ಕದಲಗೊಡಿಸುವುದಿಲ್ಲ; ನಿನ್ನನ್ನು ಕಾಯುವವನು ತೂಕಡಿಸದಿರಲಿ.

4 ಇಗೋ, ಇಸ್ರಾಯೇಲರನ್ನು ಕಾಯುವಾತನು, ತೂಕಡಿಸುವುದೂ ಇಲ್ಲ, ನಿದ್ರಿಸುವುದೂ ಇಲ್ಲ.

5 ನಿನ್ನನ್ನು ಕಾಯುವವನು ಯೆಹೋವನೇ; ನಿನ್ನ ಬಲಗಡೆಯಲ್ಲಿ ನೆರಳಿನಂತೆ ನಿಂತಿರುವಾತನು ಯೆಹೋವನೇ.

6 ಹಗಲಿನಲ್ಲಿ ಸೂರ್ಯನೂ, ಇರುಳಿನಲ್ಲಿ ಚಂದ್ರನೂ, ನಿನ್ನನ್ನು ಬಾಧಿಸುವುದಿಲ್ಲ.

7 ಯೆಹೋವನು ನಿನ್ನನ್ನು ಎಲ್ಲಾ ಕೇಡಿನಿಂದ ತಪ್ಪಿಸುವನು; ನಿನ್ನ ಪ್ರಾಣವನ್ನು ಕಾಯುವನು.

8 ನೀನು ಹೋಗುವಾಗಲೂ, ಬರುವಾಗಲೂ, ಈಗಿನಿಂದ ಸದಾಕಾಲವೂ ಯೆಹೋವನು ನಿನ್ನನ್ನು ಕಾಪಾಡುವನು.

Indian Revised Version (Kannada) 2019 — © 2017, 2019 Bridge Connectivity Solutions — CC BY-SA 4.0