ಬೈಬಲ್ · Indian Revised Version (Kannada) 2019
ಕೀರ್ತನೆಗಳು 122
1 “ಯೆಹೋವನ ಮಂದಿರಕ್ಕೆ ಹೋಗೋಣ ಬಾ!” ಎಂದು ಜನರು ನನ್ನನ್ನು ಕರೆದಾಗ ನನಗೆ ಸಂತೋಷವಾಯಿತು.
2 ಯೆರೂಸಲೇಮೇ! ನಮ್ಮ ಕಾಲುಗಳು, ನಿನ್ನ ಬಾಗಿಲುಗಳಲ್ಲಿ ಸೇರಿರುತ್ತವಲ್ಲಾ.
3 ಯೆರೂಸಲೇಮೇ! ನೀನು ಸರಿಯಾದ ಹೊಂದಿಕೆಯಿಂದ, ಕಟ್ಟಲ್ಪಟ್ಟ ನಗರವಾಗಿದ್ದಿ.
4 ಕುಲಗಳು ಅಂದರೆ ಯೆಹೋವನ ಕುಲದವರು, ಯೆಹೋವನ ನಾಮದ ಕೀರ್ತನೆಗೋಸ್ಕರ, ಇಲ್ಲಿಗೆ ಯಾತ್ರೆ ಮಾಡುತ್ತಿದ್ದರು. ಇದು ಇಸ್ರಾಯೇಲರಲ್ಲಿದ್ದ ಕಟ್ಟಳೆಯಷ್ಟೆ.
5 ನ್ಯಾಯಪೀಠಗಳಾಗಿರುವ ದಾವೀದನ ಮನೆತನದವರ, ಸಿಂಹಾಸನಗಳು ಇಲ್ಲಿಯೇ ಇದ್ದವಲ್ಲಾ.
6 ಯೆರೂಸಲೇಮಿನ ಸಮಾಧಾನಕ್ಕಾಗಿ ಪ್ರಾರ್ಥಿಸಿರಿ. “ಯೆರೂಸಲೇಮೇ, ನಿನ್ನನ್ನು ಪ್ರೀತಿಸುವವರಿಗೆ ಸೌಭಾಗ್ಯವುಂಟಾಗಲಿ.
7 ನಿನ್ನ ಪೌಳಿಗೋಡೆಗಳೊಳಗೆ ಶುಭವುಂಟಾಗಲಿ; ನಿನ್ನ ಅರಮನೆಗಳಲ್ಲಿ ಸೌಭಾಗ್ಯವಿರಲಿ.”
8 ನನ್ನ ಬಂಧುಮಿತ್ರರ ನಿಮಿತ್ತವಾಗಿ, “ನಿನಗೆ ಸಮಾಧಾನವಾಗಲಿ” ಎಂದು ಹೇಳುತ್ತೇನೆ.
9 ನಮ್ಮ ದೇವರಾದ ಯೆಹೋವನ ಮಂದಿರದ ನಿಮಿತ್ತವಾಗಿ, ನಿನ್ನ ಸುಕ್ಷೇಮಕ್ಕಾಗಿ ಪ್ರಾರ್ಥಿಸುತ್ತೇನೆ.
Indian Revised Version (Kannada) 2019 — © 2017, 2019 Bridge Connectivity Solutions — CC BY-SA 4.0