ಬೈಬಲ್ · Indian Revised Version (Kannada) 2019

ಕೀರ್ತನೆಗಳು 123

1 ಪರಲೋಕದಲ್ಲಿ ಆಸೀನನಾಗಿರುವಾತನೇ, ನನ್ನ ಕಣ್ಣುಗಳನ್ನು ನಿನ್ನ ಕಡೆಗೆ ಎತ್ತಿದ್ದೇನೆ.

2 ಯಜಮಾನನ ಕೈಯನ್ನು ದಾಸನ ಕಣ್ಣುಗಳು, ಯಜಮಾನಿಯ ಕೈಯನ್ನು ದಾಸಿಯ ಕಣ್ಣುಗಳು ನೋಡುವ ಪ್ರಕಾರವೇ, ನಮ್ಮ ಕಣ್ಣುಗಳು ನಮ್ಮ ಯೆಹೋವ ದೇವರನ್ನು ನೋಡುತ್ತಾ, ಆತನ ಕಟಾಕ್ಷವನ್ನು ನಿರೀಕ್ಷಿಸಿಕೊಂಡಿವೆ.

3 ಯೆಹೋವನೇ, ನಮ್ಮನ್ನು ಕಟಾಕ್ಷಿಸು, ಕಟಾಕ್ಷಿಸು. ಅವಮಾನ ಹೊಂದಿ ಹೊಂದಿ ನಮಗೆ ಸಾಕಾಯಿತು;

4 ಲೋಕಭೋಗಿಗಳ ಹಾಸ್ಯದಿಂದಲೂ, ಗರ್ವಿಷ್ಠರ ನಿಂದೆಯಿಂದಲೂ ನಮ್ಮ ಮನಸ್ಸು ಬೇಸತ್ತು ಹೋಯಿತು.

Indian Revised Version (Kannada) 2019 — © 2017, 2019 Bridge Connectivity Solutions — CC BY-SA 4.0