ಬೈಬಲ್ · Indian Revised Version (Kannada) 2019

ಕೀರ್ತನೆಗಳು 128

1 ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ, ಆತನ ಮಾರ್ಗಗಳಲ್ಲಿ ನಡೆಯುವವನು ಧನ್ಯನು.

2 ನಿನ್ನ ಕಷ್ಟಾರ್ಜಿತವನ್ನು ನೀನೇ ಅನುಭವಿಸುವಿ, ನೀನು ಧನ್ಯನು, ನಿನಗೆ ಶುಭವಿರುವುದು.

3 ಅಂತಃಪುರದಲ್ಲಿರುವ ನಿನ್ನ ಹೆಂಡತಿಯು, ಫಲಭರಿತವಾದ ದ್ರಾಕ್ಷಾಲತೆಯಂತೆ ಇರುವಳು; ನಿನ್ನ ಸಂಗಡ ಊಟದ ಮಣೆಯ ಸುತ್ತಲೂ ಕುಳಿತುಕೊಳ್ಳುವ ನಿನ್ನ ಮಕ್ಕಳು, ಎಣ್ಣೇಮರದ ಸಸಿಗಳ ಹಾಗೆ ಇರುವರು.

4 ಇಗೋ, ಯೆಹೋವನಲ್ಲಿ ಭಯಭಕ್ತಿಯುಳ್ಳ ಪುರುಷನು, ಈ ರೀತಿಯಾಗಿ ಆಶೀರ್ವಾದ ಹೊಂದುವನು.

5 ಚೀಯೋನಿನಲ್ಲಿರುವ ಯೆಹೋವನು ನಿನ್ನನ್ನು ಆಶೀರ್ವದಿಸಲಿ; ಜೀವಮಾನವೆಲ್ಲಾ ಯೆರೂಸಲೇಮಿನ ಸೌಭಾಗ್ಯವನ್ನು ನೋಡುವವನಾಗು.

6 ಮಕ್ಕಳ ಮಕ್ಕಳನ್ನು ಕಾಣುವವನಾಗು. ಇಸ್ರಾಯೇಲರಿಗೆ ಶುಭವಾಗಲಿ.

Indian Revised Version (Kannada) 2019 — © 2017, 2019 Bridge Connectivity Solutions — CC BY-SA 4.0