ಬೈಬಲ್ · Indian Revised Version (Kannada) 2019

ಕೀರ್ತನೆಗಳು 129

1 “ನಮ್ಮ ಯೌವನ ಕಾಲದಿಂದ ಶತ್ರುಗಳು ನಮ್ಮನ್ನು ಹಲವು ಸಾರಿ ಬಾಧಿಸಿದ್ದಾರೆ” ಎಂದು ಇಸ್ರಾಯೇಲರು ಹೇಳಲಿ.

2 “ನಾವು ಯೌವನ ಕಾಲದಿಂದ ಎಷ್ಟೋ ಸಾರಿ ಬಾಧೆ ಹೊಂದಿದರೂ, ಅವರು ನಮ್ಮನ್ನು ಜಯಿಸಲಿಲ್ಲ.

3 ಉಳುವವರು ನಮ್ಮ ಬೆನ್ನಿನ ಮೇಲೆ ಉಳುತ್ತಾ, ಉದ್ದವಾದ ಗೆರೆಗಳನ್ನು ಹಾಕಿದರು.”

4 ಆದರೆ ನೀತಿಸ್ವರೂಪನಾದ ಯೆಹೋವನು, ದುಷ್ಟರು ಹಾಕಿದ ಬಂಧನಗಳನ್ನು ಛೇದಿಸಿಬಿಟ್ಟನು.

5 ಚೀಯೋನನ್ನು ದ್ವೇಷಿಸುವವರೆಲ್ಲರೂ ಅವಮಾನದಿಂದ ಹಿಂದಿರುಗಲಿ.

6 ಅವರು ಮಾಳಿಗೆಯ ಮೇಲಣ ಹುಲ್ಲಿನಂತಾಗಲಿ; ಅದು ಹೂವು ಬಿಡುವುದಕ್ಕೆ ಮೊದಲೇ ಒಣಗಿಹೋಗುತ್ತದೆ;

7 ಅದನ್ನು ಕೊಯ್ಯುವವನ ಹಿಡಿಯೂ, ಸಿವುಡು ಕಟ್ಟುವವನ ಉಡಿಲೂ ತುಂಬುವುದಿಲ್ಲ.

8 ಹಾದುಹೋಗುವವರು, “ಯೆಹೋವನು ನಿಮ್ಮನ್ನು ಆಶೀರ್ವದಿಸಲಿ ಎಂದು, ಯೆಹೋವನ ನಾಮದಲ್ಲಿ ನಿಮ್ಮನ್ನು ಆಶೀರ್ವದಿಸುತ್ತೇವೆ” ಎಂದೂ ಹೇಳುವುದಿಲ್ಲ.

Indian Revised Version (Kannada) 2019 — © 2017, 2019 Bridge Connectivity Solutions — CC BY-SA 4.0