ಬೈಬಲ್ · Indian Revised Version (Kannada) 2019
ಕೀರ್ತನೆಗಳು 131
1 ಯೆಹೋವನೇ, ನನ್ನ ಹೃದಯದಲ್ಲಿ ಗರ್ವವಿಲ್ಲ; ನನಗೆ ಸೊಕ್ಕಿನ ಕಣ್ಣುಗಳಿಲ್ಲ; ಅಸಾಧ್ಯ ಕಾರ್ಯಗಳಿಗೆ ಕೈಹಾಕುವುದಿಲ್ಲ.
2 ನಿಜವಾಗಿ ನನ್ನ ಮನಸ್ಸನ್ನು ಸಮಾಧಾನಪಡಿಸಿಕೊಂಡಿದ್ದೇನೆ; ತಾಯಿಯ ಮಡಿಲಲ್ಲಿರುವ ಮೊಲೆಬಿಡಿಸಿದ ಕೂಸಿನಂತೆ, ನನ್ನಲ್ಲಿ ನನ್ನ ಮನಸ್ಸು ಮೊಲೆಬಿಡಿಸಿದ ಕೂಸಿನಂತೆ ನೆಮ್ಮದಿಯಿಂದಿದೆ.
3 ಇಸ್ರಾಯೇಲೇ, ಇಂದಿನಿಂದ ಯುಗಯುಗಕ್ಕೂ ಯೆಹೋವನನ್ನೇ ನಿರೀಕ್ಷಿಸಿಕೊಂಡಿರು.
Indian Revised Version (Kannada) 2019 — © 2017, 2019 Bridge Connectivity Solutions — CC BY-SA 4.0