ಬೈಬಲ್ · Indian Revised Version (Kannada) 2019
ಕೀರ್ತನೆಗಳು 134
1 ರಾತ್ರಿಯಲ್ಲಿ ಯೆಹೋವನ ಮಂದಿರದಲ್ಲಿರುವ ಆತನ ಸರ್ವಸೇವಕರೇ, ಬನ್ನಿರಿ, ಯೆಹೋವನನ್ನು ಕೊಂಡಾಡಿರಿ.
2 ಮಹಾಪರಿಶುದ್ಧ ಸ್ಥಳದ ಕಡೆಗೆ ಕೈಯೆತ್ತಿ, ಯೆಹೋವನನ್ನು ಕೊಂಡಾಡಿರಿ.
3 ಭೂಮ್ಯಾಕಾಶಗಳನ್ನು ಉಂಟುಮಾಡಿದ ಯೆಹೋವನು, ಚೀಯೋನಿನೊಳಗಿಂದ ನಿನ್ನನ್ನು ಆಶೀರ್ವದಿಸಲಿ.
Indian Revised Version (Kannada) 2019 — © 2017, 2019 Bridge Connectivity Solutions — CC BY-SA 4.0