ಬೈಬಲ್ · Indian Revised Version (Kannada) 2019

ಕೀರ್ತನೆಗಳು 15

1 ಯೆಹೋವನೇ, ನಿನ್ನ ಗುಡಾರದಲ್ಲಿ ಇಳಿದುಕೊಂಡಿರುವುದಕ್ಕೆ ಯಾರು ಯೋಗ್ಯರು? ನಿನ್ನ ಪರಿಶುದ್ಧಪರ್ವತದಲ್ಲಿ ವಾಸಿಸತಕ್ಕವನು ಎಂಥವನಾಗಿರಬೇಕು?

2 ಅವನು ಸಜ್ಜನನೂ, ನೀತಿವಂತನೂ, ಮನಃಪೂರ್ವಕವಾಗಿ ಸತ್ಯದ ಮಾತುಗಳನ್ನಾಡುವವನೂ ಆಗಿರಬೇಕು.

3 ಅವನು ಚಾಡಿಯನ್ನು ಹೇಳದವನೂ, ಮತ್ತೊಬ್ಬರಿಗೆ ಅನ್ಯಾಯ ಮಾಡದವನೂ, ಯಾರನ್ನೂ ನಿಂದಿಸದವನೂ ಆಗಿರಬೇಕು.

4 ಅವನು ಭ್ರಷ್ಟರನ್ನು ಬಿಟ್ಟುಬಿಟ್ಟವನೂ, ಯೆಹೋವನಲ್ಲಿ ಭಯಭಕ್ತಿಯುಳ್ಳವರನ್ನು ಸನ್ಮಾನಿಸುವವನೂ, ನಷ್ಟವಾದರೂ ಪ್ರಮಾಣತಪ್ಪದವನೂ ಆಗಿರಬೇಕು.

5 ಅವನು ಸಾಲಕ್ಕೆ ಬಡ್ಡಿ ಕೇಳದವನೂ, ನಿರಪರಾಧಿಯ ಕೇಡಿಗಾಗಿ ಲಂಚವನ್ನು ತೆಗೆದುಕೊಳ್ಳದವನೂ ಆಗಿರಬೇಕು. ಇಂಥವನು ಎಂದಿಗೂ ಕದಲುವುದಿಲ್ಲ.

Indian Revised Version (Kannada) 2019 — © 2017, 2019 Bridge Connectivity Solutions — CC BY-SA 4.0