ಬೈಬಲ್ · Indian Revised Version (Kannada) 2019
ಕೀರ್ತನೆಗಳು 150
1 ಯೆಹೋವನಿಗೆ ಸ್ತೋತ್ರ! ದೇವರನ್ನು ಆತನ ಪರಿಶುದ್ಧ ಆಲಯದಲ್ಲಿ ಸ್ತುತಿಸಿರಿ; ಆತನ ಶಕ್ತಿಪ್ರದರ್ಶಕವಾದ ಆಕಾಶಮಂಡಲದಲ್ಲಿ ಆತನನ್ನು ಸ್ತುತಿಸಿರಿ.
2 ಆತನ ಮಹತ್ಕಾರ್ಯಗಳಿಗಾಗಿ ಆತನನ್ನು ಸ್ತುತಿಸಿರಿ; ಆತನ ಮಹಾಪ್ರಭಾವಕ್ಕೆ ಸರಿಯಾಗಿ ಆತನನ್ನು ಸ್ತುತಿಸಿರಿ.
3 ಕೊಂಬೂದುತ್ತಾ ಆತನನ್ನು ಸ್ತುತಿಸಿರಿ; ಸ್ವರಮಂಡಲ, ಕಿನ್ನರಿಗಳಿಂದ ಆತನನ್ನು ಸ್ತುತಿಸಿರಿ.
4 ದಮ್ಮಡಿಯನ್ನು ಬಡಿಯುತ್ತಾ, ಕುಣಿಯುತ್ತಾ ಆತನನ್ನು ಸ್ತುತಿಸಿರಿ; ತಂತಿವಾದ್ಯಗಳಿಂದಲೂ, ಕೊಳಲುಗಳಿಂದಲೂ ಆತನನ್ನು ಸ್ತುತಿಸಿರಿ.
5 ತಾಳದಿಂದ ಆತನನ್ನು ಸ್ತುತಿಸಿರಿ; ಝಲ್ಲರಿಯಿಂದ ಆತನನ್ನು ಸ್ತುತಿಸಿರಿ.
6 ಶ್ವಾಸವಿರುವ ಎಲ್ಲವೂ ಯೆಹೋವನನ್ನು ಸ್ತುತಿಸಲಿ; ಯೆಹೋವನಿಗೆ ಸ್ತೋತ್ರ!
Indian Revised Version (Kannada) 2019 — © 2017, 2019 Bridge Connectivity Solutions — CC BY-SA 4.0