ಬೈಬಲ್ · Indian Revised Version (Kannada) 2019

ಕೀರ್ತನೆಗಳು 2

1 ಅನ್ಯಜನಾಂಗಗಳು ದಂಗೆಗೆ ಏಳುವುದೂ, ಜನಾಂಗಗಳು ವ್ಯರ್ಥಕಾರ್ಯಗಳನ್ನು ಯೋಚಿಸುವುದೂ ಏಕೆ?

2 ಅರಸರು ಒಟ್ಟಾಗಿ ಸೇರಿ ಆಲೋಚಿಸುತ್ತಿದ್ದಾರೆ. ದೇಶಾಧಿಪತಿಗಳು ಯೆಹೋವನಿಗೂ ಮತ್ತು ಆತನಿಂದ ಅಭಿಷೇಕಿಸಲ್ಪಟ್ಟವನಿಗೂ ವಿರುದ್ಧವಾಗಿ ಸನ್ನದ್ಧರಾಗಿ ನಿಂತಿದ್ದಾರೆ,

3 “ನಮಗೆ ಅವರು ಹಾಕಿದ ಬಂಧನಗಳನ್ನು ಕಿತ್ತುಹಾಕಿ, ಬೇಡಿಗಳನ್ನು ಮುರಿದು ಬಿಸಾಡೋಣ” ಎಂದು ಮಾತನಾಡಿಕೊಳ್ಳುತ್ತಾರಲ್ಲಾ.

4 ಪರಲೋಕದಲ್ಲಿ ಆಸೀನನಾಗಿರುವಾತನು ಅದಕ್ಕೆ ನಗುವನು; ಕರ್ತನು ಅವರನ್ನು ಪರಿಹಾಸ್ಯಮಾಡುವನು.

5 ಅನಂತರ ಆತನು ಸಿಟ್ಟಾಗಿ, ಕೋಪಾವೇಶದಿಂದ ಅವರನ್ನು ಕಳವಳಗೊಳಿಸಿ,

6 “ನಾನು ನೇಮಿಸಿದ ಅರಸನನ್ನು ಚೀಯೋನೆಂಬ ನನ್ನ ಪರಿಶುದ್ಧ ಪರ್ವತದಲ್ಲಿಯೇ ಸ್ಥಾಪಿಸಿದ್ದಾಯಿತು” ಎಂದು ಹೇಳುವನು.

7 ನಾನು ಯೆಹೋವನ ಆಜ್ಞೆಯನ್ನು ತಿಳಿಸುತ್ತೇನೆ, ಕೇಳಿರಿ; ಆತನು ನನಗೆ, “ನನಗೆ ನೀನು ಮಗನು; ನಾನೇ ಈ ಹೊತ್ತು ನಿನ್ನನ್ನು ಪಡೆದಿದ್ದೇನೆ.

8 ನೀನು ಕೇಳಿಕೊಂಡರೆ ನಾನು ಅನ್ಯಜನಗಳನ್ನೆಲ್ಲಾ ನಿನಗೆ ಅಧೀನಮಾಡುವೆನು; ಭೂಮಿಯ ಕಟ್ಟಕಡೆಯವರೆಗೂ ಇರುವ ಎಲ್ಲಾ ದೇಶಗಳನ್ನೂ ನಿನಗೆ ಸ್ವತ್ತಾಗಿ ಕೊಡುವೆನು.

9 ನೀನು ಕಬ್ಬಿಣದ ಗದೆಯಿಂದ ಅವರನ್ನು ನಾಶಮಾಡುವಿ; ಮಣ್ಣಿನ ಮಡಿಕೆಗಳನ್ನೋ ಎಂಬಂತೆ ಅವರನ್ನು ಒಡೆದುಹಾಕುವಿ” ಎಂದು ಹೇಳಿದನು.

10 ಆದುದರಿಂದ ಅರಸುಗಳಿರಾ, ವಿವೇಕಿಗಳಾಗಿರಿ; ದೇಶಾಧಿಪತಿಗಳಿರಾ, ಬುದ್ಧಿವಾದಕ್ಕೆ ಕಿವಿಗೊಡಿರಿ.

11 ಯೆಹೋವನನ್ನು ಭಯಭಕ್ತಿಯಿಂದ ಸೇವಿಸಿರಿ; ನಡುಗುತ್ತಾ ಉಲ್ಲಾಸಪಡಿರಿ.

12 ಆತನ ಮಗನಿಗೆ ಮುದ್ದಿಡಿರಿ; ಇಲ್ಲವಾದರೆ ಯೆಹೋವನ ಕೋಪವು ಬೇಗನೆ ಪ್ರಜ್ವಲಿಸಲು ನೀವು ದಾರಿಯಲ್ಲೇ ನಾಶವಾದೀರಿ. ಯೆಹೋವನನ್ನು ಆಶ್ರಯಿಸುವವರೆಲ್ಲರು ಧನ್ಯರು.

Indian Revised Version (Kannada) 2019 — © 2017, 2019 Bridge Connectivity Solutions — CC BY-SA 4.0