ಬೈಬಲ್ · Indian Revised Version (Kannada) 2019

ಕೀರ್ತನೆಗಳು 87

1 ಯೆಹೋವನು ಸ್ಥಾಪಿಸಿದ ಪಟ್ಟಣವು ಪರಿಶುದ್ಧ ಪರ್ವತದ ಮೇಲಿದೆ.

2 ಆತನು ಯಾಕೋಬ್ ವಂಶದವರ ಎಲ್ಲಾ ನಿವಾಸಗಳಿಗಿಂತ, ಚೀಯೋನಿನ ದ್ವಾರಗಳನ್ನು ಹೆಚ್ಚಾಗಿ ಪ್ರೀತಿಸುತ್ತಾನೆ.

3 ದೇವನಗರವೇ, ನಿನ್ನ ವಿಷಯವಾದ ಗೌರವೋಕ್ತಿಯೇನೆಂದರೆ,

4 “ರಹಬ, ಬಾಬೆಲ್ ದೇಶಗಳವರನ್ನು, ನನ್ನನ್ನು ಬಲ್ಲವರಲ್ಲಿ ಎಣಿಸುವೆನು. ಇಗೋ ಫಿಲಿಷ್ಟಿಯ, ತೂರ್, ಕೂಷ್, ಜನಾಂಗಗಳು ಅಲ್ಲೇ ಹುಟ್ಟಿದವು” ಎಂಬುದೇ.

5 ಇದರಿಂದ ಚೀಯೋನೇ ಪ್ರತಿಯೊಂದು ಜನಾಂಗದ ಜನ್ಮನಗರವೆಂದು ಹೇಳಲ್ಪಡುವುದು; ಅದನ್ನು ಪರಾತ್ಪರನಾದ ದೇವರು ತಾನೇ ಸ್ಥಿರಪಡಿಸುವನು.

6 ಯೆಹೋವನು ಜನಾಂಗಗಳ ಪಟ್ಟಿಯನ್ನು ಮಾಡುವಾಗ, “ಪ್ರತಿಯೊಂದರ ವಿಷಯ ಇದು ಅಲ್ಲಿಯೇ ಹುಟ್ಟಿದ್ದು” ಎಂದು ಬರೆಯುವನು. ಸೆಲಾ

7 ಇವರು ಹಾಡುತ್ತಾ, ಕುಣಿಯುತ್ತಾ, “ನನ್ನ ಜೀವಜಲದ ಒರತೆಗಳೆಲ್ಲಾ ನಿನ್ನಲ್ಲಿಯೇ ಇವೆ” ಎಂದು ಹೇಳುವರು.

Indian Revised Version (Kannada) 2019 — © 2017, 2019 Bridge Connectivity Solutions — CC BY-SA 4.0