ಬೈಬಲ್ · Indian Revised Version (Kannada) 2019
ಕೀರ್ತನೆಗಳು 93
1 ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಆತನು ಮಹಿಮಾ ವಸ್ತ್ರವನ್ನು ಧರಿಸಿದ್ದಾನೆ, ಶೌರ್ಯವನ್ನು ನಡುಕಟ್ಟನ್ನಾಗಿ ಬಿಗಿದಿದ್ದಾನೆ; ಹೌದು, ಭೂಲೋಕವು ಸ್ಥಿರವಾಗಿರುವುದು ಅದು ಕದಲುವುದಿಲ್ಲ.
2 ಅನಾದಿಯಿಂದ ನಿನ್ನ ಸಿಂಹಾಸನವು ಸ್ಥಿರವಾಗಿದೆ; ಯುಗಯುಗಾಂತರದಿಂದಲೂ ನೀನು ಇರುವಿ.
3 ಯೆಹೋವನೇ, ನದಿಗಳು ಮೊರೆದವು, ನದಿಗಳು ಭೋರ್ಗರೆದವು; ನದಿಗಳು ಘೋಷಿಸುತ್ತವೆ.
4 ಜಲರಾಶಿಗಳ ಘೋಷಕ್ಕಿಂತಲೂ, ಮಹಾತರಂಗಗಳ ಗರ್ಜನೆಗಿಂತಲೂ, ಉನ್ನತದಲ್ಲಿರುವ ಯೆಹೋವನ ಮಹಿಮೆಯು ಗಾಂಭೀರ್ಯವುಳ್ಳದ್ದು.
5 ಯೆಹೋವನೇ, ನಿನ್ನ ಕಟ್ಟಳೆಗಳು ಬಹುಖಂಡಿತವಾಗಿವೆ; ಸದಾ ನಿನ್ನ ಮನೆಗೆ ಯೋಗ್ಯವಾದದ್ದು ಪರಿಶುದ್ಧತ್ವವೇ.
Indian Revised Version (Kannada) 2019 — © 2017, 2019 Bridge Connectivity Solutions — CC BY-SA 4.0