ಇಂದಿನ ವಚನ · 2026-10-19

ಆದಿಕಾಂಡ 31:38-40

ಕುರುಬ

“ನಾನು ಇಪ್ಪತ್ತು ವರ್ಷ ನಿನ್ನ ಸಂಗಡ ಇದ್ದೆನು. ನಿನ್ನ ಹಿಂಡಿನ ಹೆಣ್ಣು ಆಡುಕುರಿಗಳನ್ನು ಕಂದು ಹಾಕಲಿಲ್ಲ. ನಿನ್ನ ಹಿಂಡಿನ ಟಗರುಗಳನ್ನು ನಾನೇನೂ ತಿಂದುಬಿಡಲಿಲ್ಲ. ಕಾಡುಮೃಗಗಳಿಂದ ಕೊಲ್ಲಲ್ಪಟ್ಟ ಕುರಿ, ಆಡುಗಳನ್ನು ನಿನ್ನ ಭಾಗಕ್ಕೆ ಹಾಕದೆ ನಾನೇ ನಷ್ಟವನ್ನು ಹೊತ್ತೆನು. ಹಗಲಿನಲ್ಲಿ, ಇರುಳಿನಲ್ಲಿ ಕಳೆದು ಹೋದದ್ದರ ಲೆಕ್ಕವನ್ನು ನನ್ನಿಂದ ತೆಗೆದುಕೊಂಡೆ. ಹಗಲಿನಲ್ಲಿ ಬಿಸಿಲಿನಿಂದಲೂ, ಇರುಳಲ್ಲಿ ಚಳಿಯಿಂದಲೂ ಬಾಧೆಪಟ್ಟೆನು, ನಿದ್ದೆಮಾಡುವುದಕ್ಕಾದರೂ ಅವಕಾಶ ಸಿಗಲಿಲ್ಲ, ನನ್ನ ಸ್ಥಿತಿ ಹೀಗಿತ್ತು.

Indian Revised Version (Kannada) 2019 — © 2017, 2019 Bridge Connectivity Solutions — CC BY-SA 4.0

“These twenty years I have been with you. Your ewes and your female goats have not cast their young, and I haven’t eaten the rams of your flocks. That which was torn of animals, I didn’t bring to you. I bore its loss. Of my hand you required it, whether stolen by day or stolen by night. This was my situation: in the day the drought consumed me, and the frost by night; and my sleep fled from my eyes.

Genesis 31:38-40 · World English Bible